Connect with us

    LATEST NEWS

    ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಎದೆನೋವು : ಆಸ್ಪತ್ರೆಗೆ ದಾಖಲು

    ಕೊಲ್ಕತ್ತಾ,ಜನವರಿ 02 : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಹಾಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    48 ವರ್ಷ ಗಂಗೂಲಿ ಆರೋಗ್ಯ ಸ್ಥಿರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯ ತುರ್ತುವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಸಂಜೆ ಎಂದಿನಂತೆ ದೈಹಿಕ ಕಸರತ್ತಿನಲ್ಲಿ ತೊಡಗಿದ್ದ ವೇಳೆ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸದ್ಯ ಗಂಗೂಲಿ ಕ್ಷೇಮವಾಗಿದ್ದಾರೆ. ಹೃದಯಾಘಾತದಿಂದ ಅಥವಾ ಇನ್ನಿತರ ಸಮಸ್ಯೆಯಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿರುವ ಕುರಿತು ವಿವಿಧ ಪರೀಕ್ಷೆಗಳು ಮೂಲಕ ತಿಳಿಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮತ್ತೊಂದು ವರದಿಯ ಪ್ರಕಾರ ಗಂಗೂಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಶನಿವಾರ ಸಂಜೆ ಆಂಜಿಯೋಪ್ಲಾಸ್ಟಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

    ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply