DAKSHINA KANNADA
ಟಿಪ್ಪು ಜಯಂತಿಗೆ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಶಾಸಕರ ವಿರೋಧ
ಟಿಪ್ಪು ಜಯಂತಿಗೆ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಶಾಸಕರ ವಿರೋಧ
ಮಂಗಳೂರು, ನವಂಬರ್ 07: ನವಂಬರ್ 10ರಂದು ರಾಜ್ಯಾದ್ಯಂತ ನಡೆಸಲು ಉದ್ದೇಶಿಸಿರುವ ಸರ್ಕಾರಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಆಹ್ವಾನಿಸಬೇಡಿ ಎಂದು ದಕ್ಷಿಣಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಳು ಮಂದಿ ಬಿಜೆಪಿ ಶಾಸಕರು ದ.ಕ ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ವಿನಂತಿಸಿದ್ದಾರೆ.
ಸರ್ಕಾರಿ ಆದೇಶದಂತೆ ದ.ಕ ಜಿಲ್ಲೆಯಲ್ಲೂ ಟಿಪ್ಪು ಜಯಂತಿ ಆಚರಿಸಲು ಉದ್ದೇಶಿಸಲಾಗಿದ್ದು, ಶಿಷ್ಟಾಚಾರದಂತೆ ಎಲ್ಲಾ ಶಾಸಕರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸುವುದು ನಿಯಮ.
ಆದರೆ ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸದಂತೆ ವಿನಂತಿಸಿದ್ದಾರೆ.
ಟಿಪ್ಪು ಹಿಂದೂಗಳು ಮತ್ತು ಕ್ರೈಸ್ತರನ್ನು ಕೊಲೆ ಮಾಡಿರುವ ವ್ಯಕ್ತಿ.
ಅಲ್ಲದೇ ಹೈಕೋರ್ಟ್ ಕೂಡ ಆತ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದಿದೆ ಎಂದು ತಿಳಿಸಿದ್ದಾರೆ.
ಹೀಗಿರುವಾಗ ರಾಜ್ಯ ಸರ್ಕಾರ ವೋಟ್ ಬ್ಯಾಂಕ್ ಗಾಗಿ ಟಿಪ್ಪು ಜಯಂತಿ ಆಚರಿಸುತ್ತಿದೆ.
ಹೀಗಾಗಿ ಜಿಲ್ಲಾಧಿಕಾರಿಗಳು ಶಿಷ್ಟಾಚಾರ ಬದಿಗೊತ್ತಿ ತಮ್ಮ ಹೆಸರು ಹಾಗೂ ಹುದ್ದೆಯನ್ನು ಬಳಸದಂತೆ ಹಾಗೂ ಕಾರ್ಯಕ್ರಮಕ್ಕೂ ತನ್ನನ್ನು ಆಹ್ವಾನಿಸದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಅಲ್ಲದೇ ಜಿಲ್ಲೆಯ ಉಳಿದ ಆರು ಬಿಜೆಪಿ ಶಾಸಕರು ಕೂಡ ಇದೇ ರೀತಿ ಪತ್ರ ಬರೆಯುವ ಸಾಧ್ಯತೆಯಿದೆ. ಪ್ರತಿ ವರ್ಷದಂತೆ ನ. 10ಕ್ಕೆ ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಮುಂದಾಗಿದ್ದು, ಬಿಜೆಪಿಯು ವಿರೋಧ ವ್ಯಕ್ತಪಡಿಸಿದೆ
You must be logged in to post a comment Login