KARNATAKA
ಒಂದು ವಾರಕ್ಕೆ ಮುನ್ನವೇ ಅಂಡಮಾನ್ ಗೆ ಮುಂಗಾರು ಪ್ರವೇಶ

ನವದೆಹಲಿ ಮೇ 14: ದೇಶದ ಕೃಷಿಕರ ಜೀವನಾಡಿ ಮುಂಗಾರುಮಳೆ ಈ ಬಾರಿ ಮುಂಚಿತವಾಗಿಯೇ ದೇಶಕ್ಕೆ ಪ್ರವೇಶವಾಗಿದೆ. ಮುಂಗಾರು ಮಾರುತಗಳು ಮಂಗಳವಾರ ಬಂಗಾಳಕೊಲ್ಲಿಯ ದಕ್ಷಿಣ, ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪದ ಕೆಲ ಪ್ರದೇಶಗಳನ್ನು ಪ್ರವೇಶಿಸಿದ್ದು, ಕಳೆದ 2 ದಿನಗಳಲ್ಲಿ ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 2 ದಿನಗಳ ಅವಧಿಯಲ್ಲಿ ಬಂಗಾಳ ಕೊಲ್ಲಿ, ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪದಲ್ಲಿ ಬೀಸುವ ಗಾಳಿಯ ವೇಗ ಹೆಚ್ಚಿದೆ. ಜೊತೆಗೆ ಮುಂದಿನ 3-4 ದಿನಗಳಲ್ಲಿ ಮಾನ್ಸೂನ್ ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಮೀನ್ಸ್ ಮತ್ತು ಕೊಮೊರಿನ್, ದಕ್ಷಿಣ ಬಂಗಾಳ ಕೊಲ್ಲಿಯ ಬಹುತೇಕ ಪ್ರದೇಶಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಅಂಡಮಾನ್ ಸಮುದ್ರದ ಉಳಿದ ಭಾಗಗಳು, ಮತ್ತು ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಪ್ರವೇಶಿಸಲು ಸೂಕ್ತ ಪರಿಸ್ಥಿತಿ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಕೇರಳಕ್ಕೆ ಪ್ರವೇಶಿಸುತ್ತಿದ್ದ ಮುಂಗಾರು ಮಳೆ ಈ ಬಾರಿ ಮೇ 27ಕ್ಕೇ ಕೇರಳಕ್ಕೆ ಕಾಲಿಡಲಿದೆ. ಹೀಗಾಗುತ್ತಿರುವುದು ಕಳೆದ 16 ವರ್ಷಗಳಲ್ಲಿ ಇದೇ ಮೊದಲು. ಮೇ ಅಂತ್ಯದ ವೇಳೆಗೆ ನೈಋತ್ಯ ಮಾನ್ಸೂನ್ ಕರ್ನಾಟಕಕ್ಕೆ ಆಗಮಿಸುವ ಸಾಧ್ಯತೆಯಿದೆ – ಜೂನ್ ಆರಂಭದಲ್ಲಿ ಸಾಮಾನ್ಯವಾಗಿ ಬರುವ ಮಳೆಗಿಂತ ಬಹಳ ಮೊದಲೇ – ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ ಈ ಋತುವಿನಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.