Connect with us

    BELTHANGADI

    ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಸಿಎಂಗೆ ಮನವಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಜುಲೈ 23: ಬೆಳ್ತಂಗಡಿಯ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮರು ತನಿಖೆ ನಡೆಸಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.


    2012ರ ಅಕ್ಟೋಬರ್ 09ರಂದು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಬಗ್ಗೆ ಹಲವಾರು ಇಲಾಖೆಗಳಿಂದ ತನಿಖೆ ನಡೆದು, ಬಳಿಕ ತಮ್ಮ ನೇತೃತ್ವದ ಸರ್ಕಾರವು 2013ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದು ತಮಗೂ ತಿಳಿದ ವಿಚಾರವಾಗಿದೆ. ಅಲ್ಲಿಂದ 2023 ರವರೆಗೂ ನಡೆದ ಸಿಬಿಐ ತನಿಖೆಯಲ್ಲಿ ಶಂಕಿತ ಆರೋಪಿಯನ್ನು ದೋಷ ಮುಕ್ತಿಗೊಳಿಸಿ ನ್ಯಾಯಾಲಯವು ಆದೇಶ ನೀಡಿದೆ.

    ಈ ತನಿಖೆಯ ಫಲಶೃತಿಯ ಬಗ್ಗೆ ಅಪರಾಧಿಗಳನ್ನು ಕಾನೂನಿನ ಚೌಕಟ್ಟಿನೊಳಗೆ ತಂದು ಶಿಕ್ಷೆ ನೀಡಲು ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂಬ ದುಗುಡ ಬೆಳ್ತಂಗಡಿಯ ಜನತೆಗಿದೆ” ಎಂದು ಮನವಿ ಪತ್ರದಲ್ಲಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.”ನಾಗರಿಕರ ಭಾವನೆಗಳನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಮೃತ ಸಹೋದರಿ ಹಾಗೂ ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕನ ನೆಲೆಯಲ್ಲಿ ಹಾಗೂ ವೈಯಕ್ತಿಕವಾಗಿ ತಮ್ಮನ್ನು ಆಗ್ರಹಿಸುತ್ತೇನೆ” ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಜೊತೆಗಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *