DAKSHINA KANNADA
ಸೌಜನ್ಯ ಕೊಲೆ ಆರೋಪಿಗಳು ಯಾರೇ ಆಗಿರಲಿ ಅವರಿಗೆ ಗಲ್ಲು ಶಿಕ್ಷೆ ನೀಡಿ – ಮಹೇಶ್ ಶೆಟ್ಟಿ ತಿಮರೋಡಿ

ಸುಳ್ಯ ಅಗಸ್ಟ್ 8: ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣo ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಿಂತಿಕಲ್ಲಿನಿಂದ ಸುಮಾರು 25 ಕಿಲೋಮೀಟರ್ ವಾಹನ ಜಾಥಾ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪ್ರತಿಭಟನಾಕಾರರು ಸೌಜನ್ಯ ಸಾವಿಗೆ ನ್ಯಾಯಕ್ಕಾಗಿ ಆಗ್ರಸಿಹಿಸಿದರು. ಪ್ರತಿಭಟನೆಯಲ್ಲಿ ಸೇರಿದ ಸಾವಿರಾರು ಸಂಖ್ಯೆಯ ಜನರು ಸೇರಿದ್ದು, ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ, ಸೌಜನ್ಯ ಕೊಲೆಗಾರ ಯಾರೇ ಆಗಿರಲಿ ಅವರಿಗೆ ಗಲ್ಲು ಶಿಕ್ಷೆ ನೀಡಿ ಎಂದರು.

ಆರೋಪಿ ದೊಡ್ಡ ವ್ಯಕ್ತಿಯಾಗಿರಲಿ ಅಥವಾ ಸಾಮಾನ್ಯ ವ್ಯಕ್ತಿಯೇ ಆಗಿರಲಿ ಅವರಿಗೆ ತಕ್ಕ ಶಿಕ್ಷೆಯಾಗಲೇ ಬೇಕು. ಈ ಹೋರಾಟ ಯಾವುದೇ ಕ್ಷೇತ್ರದ, ಧರ್ಮದ,ಜಾತಿಯ ವಿರುದ್ಧವಲ್ಲ, ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ, ಸಾವಿರ ಸಂಖ್ಯೆಯ ಅತ್ಯಾಚಾರ,ಕೊಲೆಗಳಾಗಿವೆ.
ಈ ಎಲ್ಲದರ ಹಿಂದೆ ಯಾರಿದ್ದಾರೆ ಅನ್ನೋದನ್ನ ಪತ್ತೆ ಮಾಡಿ ಎಂದು ಸರಕಾರವನ್ನು ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದರು.
https://youtu.be/WGfnViMfUjU