Connect with us

BELTHANGADI

ಸೌಜನ್ಯ ಪ್ರಕರಣದ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು- ಮಾಜಿ ಶಾಸಕ ವಸಂತ ಬಂಗೇರ ಸ್ಪೋಟಕ ಹೇಳಿಕೆ

ಬೆಳ್ತಂಗಡಿ ಅಗಸ್ಟ್ 07: ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು ಎಂದು ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಇವರ ಹೇಳಿಕೆ ಜಿಲ್ಲೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಸೌಜನ್ಯ ಪ್ರಕರಣ ಮತ್ತೊಂದು ದೊಡ್ಡ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.


ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯ ಇದೀಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಹೇಳಿಕೆಗಳು ಇದೀಗ ಪ್ರಮುಖ ರಾಜಕೀಯ ಮುಖಂಡರ ಬಾಯಿಯಿಂದ ಬರಲಾರಂಭಿಸಿದೆಯ ಈ ನಡುವೆ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನ ದಾರಿ ತಪ್ಪಿಸಲಾಗಿದೆ ಎಂಬ ಮಾತನ್ನು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದು ಪ್ರಕರಣದ ತನಿಖೆ ಬಗ್ಗೆ ಅನುಮಾನ ಮೂಡಿಸಿದೆ.


ಬೆಳ್ತಂಗಡಿಯಲ್ಲಿ ಮಾತಾಡಿದ ಅವರು ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ, ಸಿದ್ದರಾಮಯ್ಯನವರೂ ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ನನ್ನನ್ನ ಕರೆದು ಹೇಳಿದ್ರು ಇದನ್ನ ಪ್ರಸ್ತಾಪ ಮಾಡಬೇಡ …ಈ ಕೇಸನ್ನ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದರು. ‘ನಾನು ಸುಮಾರು ಒಂದೂ ಗಂಟೆಗೂ ಅಧಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದ್ದೆ. ‘ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನ ಸಿಬಿಐಗೆ ವಹಿಸಿದೆ ಎಂದರು. ಆದರೆ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು, ‘ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಎನ್ನೋದು ನನಗೆ ತಿಳಿಯಿತು. ಅದನ್ನ ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ,ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ಧ, ಒಂದಲ್ಲ ಒಂದು ದಿನ ಒಂದು ದಿನ ಕಾಲ ಬರುತ್ತೆ,


ಆವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ ಎಂದಿದ್ದಾರೆ.

ಸಿದ್ದರಾಮಯ್ಯನವರನ್ನ ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನ ಹೇಗೆ ತನಿಖೆ ಮಾಡಬೇಕೆಂಬುದನ್ನ ಹೇಳುತ್ತೇನೆ. ಇದನ್ನ ಈ ರೀತಿ ತನಿಖೆ ಮಾಡಬೇಕು, ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನೂ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನ ಅನುಭವಿಸಲೇ ಬೇಕು. ಒಗ್ಗಟ್ಟಾಗಿ ಸೌಜನ್ಯ ವಿರುದ್ಧವಾದ ದೌರ್ಜನ್ಯ ಹಾಗೂ ಕೊಲೆ ವಿರುದ್ದ ದೇಶವ್ಯಾಪಿಯಾಗಿ ಪ್ರತಿಭಟನೆಯಾಗುತ್ತೆ. ಸೌಜನ್ಯ ಕುಟುಂಬಸ್ಥರನ್ನ ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು. ಸದ್ಯ ವಸಂತ ಬಂಗೇರ ಹೇಳಿಕೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *