Connect with us

FILM

ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ..ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಚೆನ್ನೈ ಅಗಸ್ಟ್ 14 : ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂಜಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
ಈ ತಿಂಗಳ ಅಗಸ್ಟ್ 5 ರಂದು ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಸೋಂಕು ತಗಲಿರುವ ವಿಚಾರವನ್ನು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.


ಜ್ವರ ಹಾಗೂ ಶೀತ ಹಿನ್ನಲೆ ವೈದ್ಯರನ್ನು ಭೇಟಿಯಾಗಿ ಕೊವಿಡ್ ಪರೀಕ್ಷೆ ನಡೆಸಿದ್ದರು. ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನಲೆ ವೈದ್ಯರ ಸಲಹೆ ಮೇರೆಗೆ ಚೆನ್ನೈನ ಎಂಜಿಎಂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆಯ ನಂತರ ಎಸ್ ಪಿ ಬಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ತಜ್ಞ ವೈದ್ಯರ ಸಲಹೆ ಮೇರೆಗೆ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು.

ಇಂದು ಎಂಜಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಸದ್ಯ ಎಸ್ ಪಿಬಿ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.