Connect with us

LATEST NEWS

ಕೆಲಸ ಮಾಡದ ಪೊಲೀಸ್ ಅಧಿಕಾರಿಗಳನ್ನು ಲಾಕಪ್ ಗೆ ತಳ್ಳಿದ ಎಸ್ಪಿ….!!

ಬಿಹಾರ ಸೆಪ್ಟೆಂಬರ್ 11: ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿಲ್ಲ ಎಂದು ಎಸ್ಪಿ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಲಾಕಪ್ ಗೆ ಹಾಕಿದ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ.


ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ನವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಪ್ರಕರಣಗಳನ್ನು ಪರಿಶೀಲಿಸುವ ಸಲುವಾಗಿ ಸೆಪ್ಟೆಂಬರ್ 8ರಂದು ರಾತ್ರಿ 9 ಗಂಟೆ ಸುಮಾರಿಗೆ ಎಸ್​ಪಿ ಗೌರವ್ ಮಂಗ್ಲಾ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಿರಿಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡಿದ್ದ ಗೌರವ್, ತಪ್ಪು ಮಾಡಿದವರನ್ನು ಲಾಕಪ್​ನಲ್ಲಿ ಇರಿಸುವಂತೆ ಹೇಳಿದ್ದರು.


ಘಟನೆ ಸಂಬಂಧ ಗೌರವ್ ಮಂಗ್ಲಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಬಿಹಾರ ಪೊಲೀಸ್ ಒಕ್ಕೂಟ (ಬಿಪಿಎ) ಒತ್ತಾಯಿಸಿದೆ. ಸಬ್​ ಇನ್​ಸ್ಪೆಕ್ಟರ್​ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್​ರೇಖಾ ಸಿಂಗ್, ಎಎಸ್​ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಅವರು ಲಾಕಪ್​ನಲ್ಲಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

Advertisement
Click to comment

You must be logged in to post a comment Login

Leave a Reply