Connect with us

    LATEST NEWS

    ಬಾಲಕನಿಗೆ ಥಳಿತದ ಹಳೆಯ ವಿಡಿಯೋ ವೈರಲ್ – ಕಠಿಣ ಕ್ರಮದ ಎಚ್ಚರಿಕೆ ನೀಡಿದ ಎಸ್ಪಿ ಡಾ. ಅಮಟೆ ವಿಕ್ರಂ

    ಮಂಗಳೂರು ಫೆಬ್ರವರಿ 26:ಸಾಮಾಜಿಕ ಜಾಲತಾಣದಲ್ಲಿ ಬಾಲಕನೊಬ್ಬನಿಗೆ ಥಳಿಸುತ್ತಿರುವ ಹಳೆಯ ವಿಡಿಯೋ ಒಂದು ವೈರಲ್ ಆಗಿದ್ದು, ಈ ಕುರಿತಂತೆ ಇದೀಗ ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ಸ್ಪಷ್ಟನೆ ನೀಡಿದ್ದು, ಹಳೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಎಸ್ಪಿ ಡಾ. ಅಮಟೆ ವಿಕ್ರಂ ತಿಳಿಸಿದ್ದಾರೆ.


    ಈ ಬಗ್ಗೆ ಟ್ವೀಟ್ ಮೂಲಕ ಸ್ಟಷ್ಟನೆ ನೀಡಿರುವ ಎಸ್ಪಿ ಡಾ. ಅಮಟೆ ವಿಕ್ರಂ, ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಬಾಲಕನೋರ್ವನಿಗೆ ಕೆಲ ಯುವಕರು ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದಿನಾಂಕ 27/10/2021ರಂದು ಸುಬ್ರಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 77/2021 ರಂತೆ ಪ್ರಕರಣ ದಾಖಲಿಸಿಕೊಂಡು 10 ಜನ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿರುತ್ತದೆ. ಈ ರೀತಿಯ ಹಳೆಯ ವಿಡಿಯೋಗಳನ್ನು ಅದರ ಪೂರ್ವಾಪರತೆ ಪರಿಶೀಲನೆ ‌ಮಾಡದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply