Connect with us

LATEST NEWS

ಕೊರೊನಾ ಗೆದ್ದ ಸ್ವರ ಸಾಮ್ರಾಟ್ ಎಸ್ ಪಿ ಬಾಲಸುಬ್ರಹ್ಮಣ್ಯ

ಚೆನ್ನೈ: ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ.  ಕಳೆದ ಆಗಸ್ಟ್ 5 ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದರು.


ಆದರೆ ಇಂದು ಬೆಳಗ್ಗೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಈಗ ಎಸ್‍ಪಿಬಿಯವರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು.


ಎಸ್‍ಪಿಬಿಯವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶಾದ್ಯಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ.  ಎಸ್‍ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್‍ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.