LATEST NEWS
ಧರ್ಮಸ್ಥಳ ಪ್ರಕರಣ – ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು – ಸ್ಪೀಕರ್ ಖಾದರ್

ಮಂಗಳೂರು ಜುಲೈ 21: ಧರ್ಮಸ್ಥಳ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಖಾದರ್ ಪ್ರತಿಕ್ರಿಯೆ ನೀಡಿದ್ದು, ರಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದು, ತನಿಖೆ ಮೂಲಕ ಸತ್ಯಾಸತ್ಯ ಬಯಲಾಗಲಿ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯೊಬ್ಬರ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐಟಿ) ರಚನೆ ಮಾಡಿದೆ. ಸಮರ್ಪಕ ತನಿಖೆ ನಡೆದು ಸತ್ಯ ಸಂಗತಿ ಹೊರಬಂದು, ಕಾನೂನು ಕ್ರಮ ಕೈಗೊಳ್ಳಲಿ. ಆದರೆ, ತನಿಖೆ ಪೂರ್ವದಲ್ಲೇ ಪೂರ್ವಗ್ರಹದ ತೀರ್ಮಾನಕ್ಕೆ ಬರುವುದು ಸರಿಯಲ್ಲ. ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ಕೆಲಸ ಆಗಬಾರದು. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಖಾದರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದು ಪವಿತ್ರ ಕ್ಷೇತ್ರ ಕಟ್ಟಲು ಬಹಳಷ್ಟು ಶ್ರಮವಿದೆ. ಆ ಸಂಸ್ಥೆಯಿಂದ ಹಲವರಿಗೆ ಪ್ರಯೋಜನವಾಗಿದೆ. ಇಲಾಖೆಯ ತನಿಖೆಗೆ ಎಲ್ಲರೂ ಸಹಕಾರ ಕೊಡಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಷ್ಟರ ತನಕ ಸಮಾಧಾನದಿಂದ ಕಾಯೋಣ. ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾಗಬಾರದು. ಕಪ್ಪು ಚುಕ್ಕೆ ತರುವುದು ಸರಿಯಲ್ಲ ಎಂದು ಅವರು ಹೇಳಿದರು.