Connect with us

LATEST NEWS

ಈ ಹಿಂದೆ ಇಂತಹ ಘಟನೆಗಳು ನಡೆದರೂ ಈ ರೀತಿಯ ಶಿಕ್ಷೆ ನೀಡಲಾಗಿಲ್ಲ ಎಂದಾದರೆ ಅದು ಹಿಂದಿನ ಸ್ಪೀಕರ್‌ಗಳಿಗೆ ಆ ಧೈರ್ಯ ಇರಲಿಲ್ಲ ಎಂದು ಅರ್ಥ – ಖಾದರ್

ಮಂಗಳೂರು ಮಾರ್ಚ್ 24: ವಿಧಾನಸಭಾ ಅಧಿವೇಶನದಲ್ಲಿ ಕೊನೆಯ ದಿನ ಗದ್ದಲ ಎಬ್ಬಿಸಿದ್ದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದನ್ನು ಸ್ಪೀಕರ್ ಖಾದರ್ ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಈ ರೀತಿಯ ಘಟನೆಗಳಾದಾಗ ಆಗ ಇದ್ದ ಸ್ಪೀಕರ್ ಶಿಕ್ಷೆ ನೀಡಿಲ್ಲ ಎಂದರೆ ಅವರಿಗೆ ಧೈರ್ಯ ಇರಲ್ಲಿಲ್ಲ ಎಂದು ಹೇಳಿದ್ದಾರೆ.


ಮಂಗಳೂರಿನಲ್ಲಿ ಮಾತನಾಡಿದ ಅವರು ವಿಧಾನಸಭೆಯಲ್ಲಿ ಶಾಸಕರು ‘ದುಂಡಾವರ್ತನೆ ಮುಂದುವರಿಸಿದರೆ’ ಶಾಸಕರನ್ನು ವಜಾಗೊಳಿಸುವುದು ಸೇರಿದಂತೆ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಅಮಾನತುಗೊಂಡ ಶಾಸಕರು ತಮ್ಮ ಸ್ನೇಹಿತರು ಎಂದ ಸ್ಪೀಕರ್, ಶಾಸಕರು ತಮ್ಮ ಅಮಾನತು ಶಿಕ್ಷೆ ಎಂದು ಪರಿಗಣಿಸಬಾರದು. ಆದರೆ ತಮ್ಮನ್ನು ಉತ್ತಮ ಸಾರ್ವಜನಿಕ ಪ್ರತಿನಿಧಿಗಳಾಗಿ ಪರಿವರ್ತಿಸಿಕೊಳ್ಳಲು ಮತ್ತು ತಮ್ಮ ಮಾರ್ಗಗಳನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಎಂದು ಭಾವಿಸಬೇಕು. “ತಪ್ಪು ಮಾಡಿದವರು ಅದನ್ನು ಅರಿತುಕೊಳ್ಳಬೇಕು. ಅವರು ತಮ್ಮ ಕೃತ್ಯವನ್ನು ಟಿವಿ ಮುಂದೆ ಕುಳಿತು ನೋಡಬೇಕು” ಎಂದು ಹೇಳಿದರು.

“ಒಂದು ವೇಳೆ ಅವರು ಗದ್ದಲ ಸೃಷ್ಟಿಸುವುದನ್ನು ಮತ್ತು ‘ಸ್ಪೀಕರ್‌’ ಪೀಠವನ್ನು ಅವಮಾನಿಸುವುದನ್ನು ಮುಂದುವರಿಸಿದರೆ, ನಾನು ಅವರ ವಿರುದ್ಧ ಒಂದು ವರ್ಷದ ಅಮಾನತು ಸೇರಿದಂತೆ ತೀವ್ರ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ” ಎಂದು ಸ್ಪೀಕರ್ ಎಚ್ಚರಿಕೆ ನೀಡಿದ್ದಾರೆ. ಶಾಸಕರು ಏನೂ ಆಗದು ಎಂಬ ಧೈರ್ಯದಲ್ಲಿ ಈ ರೀತಿ ವರ್ತಿಸಿ ರಾಜ್ಯದ ಘನತೆಗೆ ಕುಂದು ತಂದಿದ್ದಾರೆ. ಧನ ವಿನಿಯೋಗದ ಬಿಲ್ ಮಂಜೂರು ಆಗುವುದು ಕೊನೆಯ ದಿನದಂದು. ಅದನ್ನು ತಡೆಯುವ ಉದ್ದೇಶದಿಂದಲೇ ಈ ಕೃತ್ಯ ನಡೆದಿದೆ ಎಂದರು.

ಧನ ವಿನಿಯೋಗ ಬಿಲ್‌ ಮಂಜೂರು ಆಗದಿದ್ದರೆ, ವೇತನ ಪಾವತಿ, ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗುತ್ತದೆ. ಮತ್ತೆ ಬಿಲ್ ಮಂಡಿಸಲೂ ಆಗುವುದಿಲ್ಲ. ಅವರ ಆ ವರ್ತನೆಗೆ ಅಧಿವೇಶನ ಮುಗಿಯುವರೆಗೆ ಮಾತ್ರ ಮಾಡಿದರೆ, ಕೊನೆಯ ದಿನ ಈ ರೀತಿ ಮಾಡುವುದರಿಂದ ತಮಗೇನು ತೊಂದರೆ ಆಗದು ಎಂಬ ಕಲ್ಪನೆ ದೂರವಾಗಬೇಕು. ರಾಜ್ಯದಲ್ಲಿ ಸದನಕ್ಕಿಂತ ದೊಡ್ಡ ಸಂವಿಧಾನ ಸಂಸ್ಥೆ ಬೇರಿಲ್ಲ. ಅಧ್ಯಕ್ಷ ಪೀಠಕ್ಕಿಂತ ದೊಡ್ಡದು ಅಲ್ಲಿ ಬೇರೆ ಇಲ್ಲ ಎಂಬ ಅರಿವು ಶಾಸಕರಿಗೆ ಇರಬೇಕು. ಸಭಾಧ್ಯಕ್ಷನಾಗಿ ಈ ರೀತಿಯ ವರ್ತನೆ ಸಹಿಸಲು ಅಸಾಧ್ಯ ಹಾಗಾಗಿ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *