Connect with us

KARNATAKA

‘ಸ್ಪೀಕರ್​ ಖಾದರ್‌ಗೆ ಸಿಗುವುದು ಜಾಮಿಯ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ’ ಸಿಟಿ ರವಿ ವ್ಯಂಗ್ಯ

ಉಡುಪಿ : ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿಮುಖಂಡ ಸಿಟಿ ರವಿ ಸಚಿವ ಜಮೀರ್ ಅಹ್ಮದ್‌ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗೋದು ಎಂದು ವಾಗ್ದಾಳಿ ನಡೆಸಿದ್ದಾರೆ.ಸ್ಪೀಕರ್ ಯುಟಿ ಖಾದರ್ ಅವರ ಘನತೆಯನ್ನು ಹಾಳು ಮಾಡಬೇಡಿ ಎಂದು ಸಚಿವ ಜಮೀರ್ ಅಹ್ಮದ್‌ಗೆ ಮಾತಿನಿಂದಲೇ ತಿವಿದಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿ ಅಸಮಾಧಾನ ಹೊಂದಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೇ ನೀಡಿದ ಸಿಟಿ ರವಿ, ನಾನು ರೇಸ್​ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವು ತಂಡವಾಗಿ ಕೆಲಸ ಮಾಡುತ್ತೇವೆ, ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಜೊತೆ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯವಾಗಿದೆ ಎಂದು ಸಿಟಿ ರವಿ ಹೇಳಿದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *