KARNATAKA
ಉಪಸಭಾಧ್ಯಕ್ಷರ ಮೇಲೆ ಪೇಪರ್ ಎಸೆದ ಬಿಜೆಪಿಯ 10 ಮಂದಿ ಶಾಸಕರು ಸದನದಿಂದ ಸಸ್ಪೆಂಡ್….!!
ಬೆಂಗಳೂರು ಜುಲೈ 19: ಉಪಸಭಾಧ್ಯಕ್ಷರ ಮೇಲೆ ಪೇಪರ್ ಎಸೆದು ಪ್ರತಿಭಟನೆ ನಡೆಸಿದ 10 ಮಂದಿ ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಸದನದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಸದಸ್ಯರಾದ ಆರ್.ಅಶೋಕ್, ವೇದವ್ಯಾಸ್ ಕಾಮತ್, ಕೋಟ್ಯಾನ್, ಭರತ್ ಶೆಟ್ಟಿ, ಸುನಿಲ್ ಕುಮಾರ್, ಆರಗ ಜ್ಞಾನೇಂದ್ರ, ಅರವಿಂದ ಬೆಲ್ಲದ್, ದೀರಜ್ ಮುನಿರಾಜ್, ಅಶ್ವತ್ಥ ನಾರಾಯಣ್, ಯಶ್‌ಪಾಲ್ ಸುವರ್ಣ ಸಸ್ಪೆಂಡ್ ಆದ ಬಿಜೆಪಿ ಶಾಸಕರಾಗಿದ್ದಾರೆ.
ಇವತ್ತು ಬೆಳಗ್ಗೆ ಆರಂಭವಾದ ಸದನದಲ್ಲಿ ಪ್ರತಿಪಕ್ಷ ನಾಯಕರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ನಿನ್ನೆ ಬೆಂಗಳೂರಲ್ಲಿ ನಡೆದ ಕಾಂಗ್ರೆಸ್ ಮಿತ್ರಪಕ್ಷಗಳ ಸಭೆಯಲ್ಲಿ IAS ಅಧಿಕಾರಿಗಳನ್ನು ನಿಯೋಜಿಸಿದ್ದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಲಾಯ್ತು. ಇದೇ ವಿಚಾರಕ್ಕೆ ಗದ್ದಲ, ಗಲಾಟೆ ನಡೆದು ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಹೋರಾಟ ನಡೆಸಿದರು. ಈ ವೇಳೆ ವಿಧಾನಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಮೇಲೆ ಪೇಪರ್ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಸದನದಲ್ಲಿ ಉಪಸಭಾಧ್ಯಕ್ಷರ ಮೇಲೆ ಬಿಜೆಪಿ ಸದಸ್ಯರು ಎಸೆದು ಪ್ರತಿಭಟನೆ ನಡೆಸಿದರೆ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.