Connect with us

LATEST NEWS

ಕೋಮುಗಲಭೆ ನಡೆಸುವವರ ಬೆಂಡೆತ್ತಲು ರೆಡಿಯಾದ ವಿಶೇಷ ಕಾರ್ಯಪಡೆ

ಮಂಗಳೂರು ಜುಲೈ 02: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಮೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹರ್ದತೆ ಮತ್ತು ಶಾಂತಿ ವಾತವಾರಣವನ್ನು ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಂದು ತರಭೇತಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಗಿದೆ.

ದ.ಕ. ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ವಿಶೇಷ ಕಾರ್ಯಪಡೆ (ಎಸ್‌ಎಎಫ್) ಅಧಿಕಾರಿ ಮತ್ತು ಸಿಬ್ಬಂದಿಗೆ ನಗರದ ನೆಹರೂ ಮೈದಾನದಲ್ಲಿ ಬುಧವಾರ ಪ್ರಾತ್ಯಕ್ಷಿಕೆಯೊಂದಿಗೆ ತರಬೇತಿ ನೀಡಲಾಯಿತು.

ಕೋಮು ಗಲಭೆಗಳ ಸಂದರ್ಭ ಉದ್ರಿಕ್ತ  ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ Anti Riots gun & Stun Shell ನ್ನು ಉಪಯೋಗಿಸುವ ಬಗ್ಗೆ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ತರಬೇತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.


ಈ ತರಬೇತಿ ಮತ್ತು ಪ್ರಾತ್ಯಕ್ಷಿಕೆಯಲ್ಲಿ ವಿಶೇಷ ಕಾರ್ಯಪಡೆ ಘಟಕದ Operational wing ನ 95 ಜನ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ. ಅಲ್ಲದೇ ಗುಪ್ತಚರ ವಿಭಾಗದ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸುವ ಬಗ್ಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುವ ದ್ವೇಷ ಭಾಷಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವ ಕುರಿತು ಪರಿಣಾಮಕಾರಿಯಾಗಿ ತರಬೇತಿಯನ್ನು ನೀಡಲಾಗಿದ್ದು, ಕಾರ್ಯಪ್ರವೃತ್ತಿಗೆ ಸನ್ನದ್ದರಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *