LATEST NEWS
ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ, ಮಂಗಳೂರಿಗೆ ಬಂದ ವಿಶೇಷ ಕಾರು
ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ, ಮಂಗಳೂರಿಗೆ ಬಂದ ವಿಶೇಷ ಕಾರು
ಮಂಗಳೂರು ಅಕ್ಟೋಬರ್ 27:- ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ಧರ್ಮಸ್ಥಳಕ್ಕೆ ಆಗಮನದ ಹಿನ್ನಲೆಯಲ್ಲಿ ಮೋದಿ ಅವರ ಪ್ರವಾಸಕ್ಕಾಗಿ ವಿಶೇಷ ಕಾರು ಮಂಗಳೂರಿಗೆ ತಲುಪಿದೆ.
ಇಂದು ಬೆಳಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಯುಪಡೆಯ ವಿಮಾನದಲ್ಲಿ ಈ ಕಾರು ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ ನಂತರ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳುವರು ನಂತರ ಧರ್ಮಸ್ಥಳದಲ್ಲಿ ದೇವರ ದರ್ಶನ ಪ಼ಡೆದು , ಉಜಿರೆಯಲ್ಲಿ ನಡೆಯಲಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಓಡಾಟಕ್ಕೋಸ್ಕರ ವಿಶೇಷ ಕಾರು ಬಂದಿದ್ದು. ವಾಯುಪಡೆಯ ವಿಮಾನದಲ್ಲಿ ವಿಶೇಷ ಕಾರು ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದೆ.
You must be logged in to post a comment Login