KARNATAKA
ಮುಡಾಹಗರಣ,ಸಿದ್ದರಾಮಯ್ಯ ವಿರುದ್ಧದ ದೂರು ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನ
ಬೆಂಗಳೂರು : ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಸಮರಕ್ಕೆ ವೇದಿಕೆಯಾದ ಮುಡಾಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸುವ ಸಂಬಂಧ ನ್ಯಾಯಾಲಯವು ಆದೇಶ ನೀಡುವ ಸಾಧ್ಯತೆ ಇದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಡಾ ಹಗರಣ ಒಂದು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೆ ಇತ್ತೀಚಿಗೆ ಬಿಜೆಪಿ ಮತ್ತು ಜೆಡಿಎಸ್ ಈ ಒಂದು ಹಗರಣವನ್ನು ಖಂಡಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬೆಂಗಳೂರಿನಿಂದ ಮೈಸೂರಿನವರೆಗೆ ಮೈಸೂರು ಚಲೋ ಪಾದಯಾತ್ರೆ ಕೂಡ ಮಾಡಿತ್ತು. ಇದಕ್ಕೆ ಕೌಂಟರ್ ಕೊಡಲು ಕಾಂಗ್ರೆಸ್ ಸಹ ಜನಾಂದೋಲನ ಸಭೆಯನ್ನು ಸಹ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಟಿಜೆ ಅಬ್ರಹಾಂ ಮತ್ತೊಂದು ಖಾಸಗಿ ದೂರು ಸಲ್ಲಿಸಿದ್ದಾರೆ. ನ್ಯಾಯಾಲಯ ನೀಡುವ ಆದೇಶವನ್ನು ನೋಡಿಕೊಂಡು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ನೀಡಿರುವ ದೂರನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
You must be logged in to post a comment Login