Connect with us

    LATEST NEWS

    ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ

    ಮಂಗಳೂರು ಜನವರಿ 16 : ಮಂಗಳೂರಿನ ಖಾಸಗಿ ಬಸ್ ಒಂದರಲ್ಲಿ ಯುವತಿಯೊರ್ವಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದ್ದಾರೆ.


    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮಾಜಿಕ ಜಾಲತಾಣದಲ್ಲಿ ಯುವತಿ ಹಾಕಿದ ಪೋಸ್ಟ್‌‌‌‌‌ ಅನ್ನು ನೋಡಿದ ಬಳಿಕ ಅವರನ್ನು ಸಂಪರ್ಕಿಸಲಾಗಿದ್ದು, ಯುವತಿಯೇ ಉಳ್ಳಾಲ ಠಾಣೆಗ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದರು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕರನ್ನು ಕರೆದು ವಿಚಾರಣೆ ನಡೆಸಲಾಗುವುದು. ಅಲ್ಲದೆ ಶೀಘ್ರವೇ ಬಸ್‌‌‌ ಸಂಘ, ಮಾಲಕರ ಸಭೆ ಕರೆಯಲಾಗುವುದು. ಮಹಿಳೆಯ, ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.


    ಬಸ್‌‌‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದರೆ ಈ ರೀತಿಯಾದ ಘಟನೆಗಳನ್ನು ತಪ್ಪಿಸಬಹುದಾಗಿದೆ. ಅಲ್ಲದೇ, ಮಹಿಳಾ ತಂಡವೊಂದನ್ನು ರಚಿಸಿ, ಮಫ್ತಿಯಲ್ಲಿ ಕಾರ್ಯಾಚರಣೆ ನಡೆಸಲು ಚಿಂತನೆ ನಡೆಸಿದ್ದೇವೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply