LATEST NEWS
ಭಾರತೀಯ ಸೇನೆಗೆ ಶ್ರೇಯಸ್ಸು ಕೋರಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮಂಗಳೂರು, ಮೇ 08: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿನ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಭಾರತೀಯ ಸೇನೆಗೆ ಶ್ರೇಯಸ್ಸು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಭಾರತದ ಯೋಧರಿಗೆ ಸ್ಥೈರ್ಯ ತುಂಬಲು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ದೇವಳದ ಆಡಳಿತ ಮಂಡಳಿಯಿಂದ ಸೈನ್ಯದ ಪರವಾಗಿ ಮಂಜುನಾಥ ಸ್ವಾಮಿಗೆ ರುದ್ರಾಭಿಷೇಕ, ಸೀಯಾಳಾಭಿಷೇಕ ಹಾಗು ಸೈನಿಕರಿಗೆ ಶಕ್ತಿ ತುಂಬಲು ದೇವರಿಗೆ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು.

ಆಡಳಿತ ಮಂಡಳಿ ಸದಸ್ಯರು, ಎಂಎಲ್ ಸಿ ಐವನ್ ಡಿಸೋಜಾ,ಮಾಜಿ ಶಾಸಕ ಜೆ.ಆರ್ ಲೋಬೋ,ಪದ್ಮರಾಜ್ ಪೂಜಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.