LATEST NEWS
ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ವಿಶೇಷ ರೈಲು
ಮಂಗಳೂರು ಡಿಸೆಂಬರ್ 21: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ.
ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.