Connect with us

LATEST NEWS

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ..!

ದಕ್ಷಿಣ ಭಾರತದ ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದೇವಾಲಯಕ್ಕೆ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿಯವರು ಮಂಗಳವಾರ ಭೇಟಿ ನೀಡಿದ್ದಾರೆ.

ಕಡಬ : ದಕ್ಷಿಣ ಭಾರತದ ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ  ದೇವಾಲಯಕ್ಕೆ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿಯವರು ಮಂಗಳವಾರ ಭೇಟಿ ನೀಡಿದ್ದಾರೆ.

 

ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಹು ವಿಜೃಂಭಣೆಯಿಂದ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು ದೇವಸ್ಥಾನದ ವತಿಯಿಂದ ದೇಗುಲದ ಆನೆ ಯಶಸ್ವಿ ಉಪಸ್ಥಿತಿಯಲ್ಲಿ ಬ್ಯಾಂಡ್‌, ವಾಲಗದೊಂದಿಗೆ ಸ್ವಾಗತಿಸಲಾಯಿತು. ಕಾಶಿಕಟ್ಟೆಯಿಂದ ಮೆರವಣಿಗೆಯಲ್ಲಿ ದೇವಸ್ಥಾನದ ವರೆಗೆ ಕರೆತರಲಾಯಿತು. ದೇಗುಲದ ರಾಜಗೋಪುರದ ಬಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಮೀಜಿಯವರನ್ನು ಸ್ವಾಗತಿಸಿದರು . ಸ್ವಾಮೀಜಿ ದೇವಾಲಯದಲ್ಲಿನ ದರ್ಪಣ ತೀರ್ಥ ನದಿಗೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಧಿಕಾರಿಗಳು, ಸಿಬಂದಿ ಮತ್ತಿತರರು ಉಪಸ್ಥಿತರಿದ್ದರು.

 

 

ಪುತ್ತೂರು: ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ಮಾರ್ಗಸೂಚಿ ಜಾರಿ..!

Share Information
Continue Reading
Advertisement
Click to comment

Leave a Reply

Your email address will not be published. Required fields are marked *