ಶ್ರೀಕಾಕುಲಂ ನವೆಂಬರ್ 1: ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ 9ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಕಾರ್ತಿಕ ಮಾಸದ ಏಕಾದಶಿ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ ಎಂದು ಆಂಧ್ರ ಪ್ರದೇಶ ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.


ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದ ಬಳಿ ಬೆಳಿಗ್ಗೆ 11.30ರ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ‘ಶ್ರೀಕಾಕುಲಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತವು ನನಗೆ ನೋವುಂಟು ಮಾಡಿದೆ. ಅಹಿತಕರ ಘಟನೆಯಲ್ಲಿ ಭಕ್ತಾಧಿಗಳು ಪ್ರಾಣ ಕಳೆದುಕೊಂಡಿರುವುದು ದುಃಖದ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ’ ಎಂದಿದ್ದಾರೆ.

Share Information