LATEST NEWS
ಧರ್ಮಸ್ಥಳ ಪ್ರಕರಣ – ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ

ಮಂಗಳೂರು ಜುಲೈ 20: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ರಾಜ್ಯ ಸರಕಾರ ಎಸ್ ಐಟಿ ರಚಿಸಿರುವುದನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಈ ಕುರಿತಂತೆ ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ಮಾಜಿ ನೌಕರ ಎಂದು ಹೇಳಲಾದ ಅನಾಮಿಕ ವ್ಯಕ್ತಿ ಮಾಡಿರುವ ಆರೋಪಗಳಿಗೆ ಇದೀಗ ರಾಜ್ಯ ಸರಕಾರ ಎಸ್ ಐಟಿ ಮೂಲಕ ತನಿಖೆ ನಡೆಸಲು ಮುಂದಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದ ತಂಡ ನಡೆಸಲಿದೆ.

ಇದೀಗ ಈ ಎಸ್ಐಟಿ ತನಿಖೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಈ ಕುರಿತಂತೆ ಧರ್ಮಸ್ಥಳ ಕ್ಷೇತ್ರದ ವಕ್ತಾರ ಕೆ.ಪಾರ್ಶ್ವನಾಥ್ ಜೈನ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಈ ವಿಚಾರ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಾರ್ತೆಗಳು, ಊಹಾ ಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ. ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.