Connect with us

    LATEST NEWS

    ಯುವತಿಯ ಮೇಲೆ ಅತ್ಯಾಚಾರ -ಶ್ರೀಲಂಕಾ ಕ್ರಿಕೆಟ್ ಆಟಗಾರ ಅರೆಸ್ಟ್

    ಸಿಡ್ನಿ: ಟಿ20 ವಿಶ್ವಕ್ರಿಕೆಟ್ ಸಂದರ್ಭ ಯುವತಿಯ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಮೇಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.


    ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ ಮೇಲೆ ಅತ್ಯಾಚಾರದ ದೂರು ನೀಡಿದ್ದಾರೆ. ರೋಸ್‌ಬೇಯಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಗುಣತಿಲಕ ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಮಹಿಳೆಯೊಬ್ಬರ ಸಂಪರ್ಕ ಮಾಡಿದ್ದರು. ಬಳಿಕ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಟೂರ್ನಿಯಲ್ಲಿ ಇಂಗ್ಲೆಂಡ್ ಜೊತೆ ಕೊನೆ ಪಂದ್ಯವಾಡಿ ಸೋತು ಟೂರ್ನಿಯಿಂದ ಹೊರಬಿದ್ದಿರುವ ಶ್ರೀಲಂಕಾ ತಂಡ ತವರಿಗೆ ಮರಳಿದೆ. ಅತ್ಯಾಚಾರ ಆರೋಪ ಬಂದಿರುವ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲೇ ಬಿಟ್ಟು ಉಳಿದ ಆಟಗಾರರು ಶ್ರೀಲಂಕಾಕ್ಕೆ ತೆರಳಿದ್ದಾರೆ ಎಂದು ಪಿಟಿಐ ವರದಿ ಹೇಳಿದೆ.

    Share Information
    Advertisement
    Click to comment

    You must be logged in to post a comment Login

    Leave a Reply