LATEST NEWS
ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀಯ, ಯಶಸ್ಸು ಸಿಗಲಿದೆ ಎಂದು ಶ್ರೀನಿಧಿ ಶೆಟ್ಟಿಗೆ ದೈವದ ಅಭಯ

ಮಂಗಳೂರು ಮೇ 08: ಕನ್ನಡದ ಖ್ಯಾತ ನಟಿ ಕೆಜಿಎಫ್ ಬೆಡಗಿ ಮಂಗಳೂರಿನಲ್ಲಿ ತಮ್ಮ ಕುಟುಂಬದ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿದೆ.
ಭಾರತೀಯ ಚಿತ್ರರಂಗವನ್ನೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್ ಚಿತ್ರದ ನಟಿ ಶ್ರೀನಿಧಿ ಶೆಟ್ಟಿ ಕರಾವಳಿಯ ಮೂಲದವರು, ಈಗಾಗಲೇ ಸಿನೆಮಾದಲ್ಲಿ ಯಶಸ್ಸಿನಲ್ಲಿರು ಅವರು ತಾವು ಹೊತ್ತ ಹರಕೆಯನ್ನು ತಿರಿಸಿದ್ದಾರೆ. ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ಮಂಗಳೂರಿನ ಹೊರವಲಯದ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆಸಿದ್ದಾರೆ. ಈ ಹಿಂದೆ ತನ್ನ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಹೊತ್ತಂತೆ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನೆರವೇರಿಸಿದ್ದಾರೆ.

ಈ ನೇಮೋತ್ಸವದಲ್ಲಿ ಶ್ರೀನಿಧಿ ಶೆಟ್ಟಿ ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದಾರೆ. ತನ್ನ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು, ತನ್ನ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿಕೊಂಡಿದ್ದರು. ಅದರಂತೆ ಶ್ರೀನಿಧಿ ಶೆಟ್ಟಿ ಇದೀಗ ಹರಕೆಯನ್ನು ಸಲ್ಲಿಸಿದ್ದಾರೆ. ಇನ್ನು ನೇಮೋತ್ಸವದಲ್ಲಿ ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀಯ, ಯಶಸ್ಸು ಸಿಗಲಿದೆ ಎಂದು ದೈವಗಳು ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿದೆ.