LATEST NEWS
ಕರೋನಾ ಹಿನ್ನಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ
ಕರೋನಾ ಹಿನ್ನಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು ಮಾರ್ಚ್ 22: ಕರೋನಾ ಮಹಾಮಾರಿಗೆ ಮಾರ್ಚ್ 27ರಂದು ಪ್ರಾರಂಭವಾಗಬೇಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆದೇಶದ ಮೇರೆಗೆ ಮುಂದೂಡಲಾಗಿದೆ. ನಾಳೆ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಹಾಮಾರಿ ಕೊರೋನಾ ವೈರಸ್ ಎಲ್ಲೆಡೆ ಹರಡಿರುವ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಇಡೀ ಜಗತ್ತಿನೆಲ್ಲೆಡೆ ಸಾಂಕ್ರಾಮಿಕ ರೋಗ ಕೊರೊನಾವೈರಸ್ ಹರಡಿದ್ದು ಸಾವಿರಾರು ಜನರು ಈ ಸೋಂಕಿನಿಂದ ಅಸುನೀಗಿದ್ದಾರೆ. ನಮ್ಮ ರಾಜ್ಯದಲ್ಲಿ ಈಗಾಗಲೇ ಒಬ್ಬರು ಅಸುನೀಗಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ
ಕೊರೋನಾ ವೈರಸ್ ಸದ್ಯ ಹಳ್ಳಿಗಳಲ್ಲಿ ಅಷ್ಟೊಂದು ಪಸರಿಸಿಲ್ಲ, ಅಲ್ಲದೆ ಹಳ್ಳಿಗಳಲ್ಲಿ ಸೋಂಕು ಚಿಕಿತ್ಸೆಗಳಿಗೂ ಅಷ್ಟೊಂದು ಅನುಕೂಲಗಳಿರುವುದಿಲ್ಲ. ಹೀಗಾಗಿ ಇನ್ನು 15 ದಿನಗಳವರೆಗೆ ನಗರಗಳಿಂದ ಯಾರೂ ಪ್ರಯಾಣ ಮಾಡಬೇಡಿ. ತೀರಾ ಅಗತ್ಯವಿದ್ದರೆ ಮಾತ್ರ ಹಳ್ಳಿಗಳಿಗೆ ಹೋಗಿ ಎಂದು ಮುಖ್ಯಮಂತ್ರಿ ಜನತೆಗೆ ಮನವಿ ಮಾಡಿದ್ದಾರೆ.
ಇಂದು ಮಾತ್ರ ಜನತಾ ಕರ್ಫ್ಯೂ ಇದ್ದು ನಾಳೆಯಿಂದ ಎಂದಿನಂತೆ ದಿನಸಿ, ತರಕಾರಿ, ಅಗತ್ಯ ವಸ್ತುಗಳ ಅಂಗಡಿಗಳು ತೆರೆದಿರುತ್ತವೆ. ಸಾರಿಗೆ ಸಂಚಾರಗಳು ಸಹ ಎಂದಿನಂತೆ ಇರಲಿವೆ ಎಂದರು. ಕೊರೋನಾ ತಡೆಗೆ ರಾಜ್ಯದ ಗಡಿ ಭಾಗಗಳನ್ನು ಮುಚ್ಚಲಾಗುತ್ತದೆ ಎಂದರು