LATEST NEWS
ಎಸ್ಎಸ್ಎಲ್ ಸಿ ಪರೀಕ್ಷೆ ಒಂದು ಕೊಠಡಿಯಲ್ಲಿ ಕೇವಲ 20 ವಿಧ್ಯಾರ್ಥಿಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30,835 ವಿದ್ಯಾರ್ಥಿಗಳು
ಮಂಗಳೂರು ಜೂನ್ 6: ಎಸ್‌ಎಸ್ಎಲ್ ಸಿ ಪರೀಕ್ಷೆ ಜೂನ್ 25 ರಿಂದ ಜೂನ್ 4ರ ವರೆಗೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30,835 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದು ಎಂದರು.

ದ.ಕ. ಜಿಲ್ಲೆಯಲ್ಲಿ 95 ಪರೀಕ್ಷೆ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಹೆಚ್ಚುವರಿಯಾಗಿ 19 ಪರೀಕ್ಷೆ ಕೇಂದ್ರಗಳು ಕಾದಿರಿಸಲಾಗಿದ್ದು, ಸರಕಾರದ ಮಾರ್ಗಸೂಚಿಯಂತೆ ಪ್ರತಿ ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಥರ್ಮಲ್ ಸ್ಕ್ರೀನ್ ಮೂಲಕ ಪರೀಕ್ಷಿಸಲಾಗುತ್ತದೆ. ವಿದ್ಯಾರ್ಥಿಗೆ ರೋಗದ ಯಾವುದೇ ಲಕ್ಷಣ ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ 102 ವಿಶ್ರಾಂತಿ ಕೊಠಡಿ ಸಿದ್ಧಪಡಿಸಲಾಗುವುದು ಎಂದರು.
ಕಾಸರಗೋಡಿನ 345 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದು, ಹಾಲ್‌ಟಿಕೆಟ್ ತೋರಿಸಿ ಗಡಿ ಪ್ರವೇಶಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.