Connect with us

  LATEST NEWS

  SSLC ಪರೀಕ್ಷೆ ಫಲಿತಾಂಶ – ಉಡುಪಿ ಪ್ರಥಮ ದಕ್ಷಿಣಕನ್ನಡ ದ್ವಿತೀಯ

  ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಅವರು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.ಪರೀಕ್ಷೆಯಲ್ಲಿ ಒಟ್ಟು 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕರು – 2,87,416 (65.90%) ಹಾಗೂ ಬಾಲಕಿಯರು – 3,43,788 (81.11%) ಪಾಸ್‌ ಆಗಿದ್ದಾರೆ.

  94% ಫಲಿತಾಂಶದೊಂದಿಗೆ ಉಡುಪಿ ಮೊದಲ ಸ್ಥಾನದಲ್ಲಿದೆ. 92.12% ನೊಂದಿಗೆ ದಕ್ಷಿಣ ಕನ್ನಡ ಹಾಗೂ 88.67% ನೊಂದಿಗೆ ಶಿವಮೊಗ್ಗ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ. ಯಾದಗಿರಿ ಯಾದಗಿರಿ – 50.59% ನೊಂದಿಗೆ ಕೊನೆ ಸ್ಥಾನದಲ್ಲಿದೆ.
  ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರು 625ಕ್ಕೆ 625 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮೆಳ್ಳಿಗೇರಿಯವರಾಗಿದ್ದಾರೆ. ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply