LATEST NEWS
ಬ್ರೂಸ್ಲಿ ಜಸ್ಟ್ ಪಾಸಾಗಿರೊದೆ ನಮಗೆಲ್ಲ ಸಂಭ್ರಮ ಸಂಭ್ರಮ

ಮಂಗಳೂರು ಮೇ 12:ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಬಂದಿದ್ದು, ಉತ್ತಮ ಅಂಕಬಂದಿಲ್ಲ ಎಂದು ಕೆಲವರು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದರೆ. ಇನ್ನು ಕೆಲವರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಆದರೆ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬ ನಿಗೆ ಆತನ ಸ್ನೇಹಿತರು ಅಭಿನಂದನಾ ಬ್ಯಾನರನ್ನೇ ಹಾಕಿ ಭರ್ಜರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಪಚ್ಚನಾಡಿಯ ಹ್ಯಾಸ್ಲಿನ್ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೊ ಎಂಬ ಗೊಂದಲದಲ್ಲಿ ಆತನ ಸ್ನೇಹಿತರಿದ್ದರು. ಕೊನೆಗೆ ರಿಸಲ್ಟ್ ಬರುವಾಗ ಹ್ಯಾಸ್ಲಿನ್ ಪಾಸಾಗಿಬಿಟ್ಟಿದ್ದ. ಇದೇ ಖುಷಿಯಲ್ಲಿ ಅವನ ಸ್ನೇಹಿತರು ಪಚ್ಚನಾಡಿಯ ಮಂಗಳಾನಗರದ ರಸ್ತೆ ಬದಿಯಲ್ಲಿ ದೊಡ್ಡ ಬ್ಯಾನರನ್ನೇ ಅಳವಡಿಸಿ ಜಸ್ಟ್ ಪಾಸಾದ ಸ್ನೇಹಿತನಿಗೆ ವಿಭಿನ್ನ ರೀತಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬ್ಯಾನರ್ ಜಾಲತಾಣದಲ್ಲಿ ವೈರಲ್
