Connect with us

    BANTWAL

    ಕಲಿಕಾ ಹಿಂಜರಿಕೆಯ ಭೀತಿ,ನೇಣಿಗೆ ಕೊರಳೊಡ್ಡಿದ SSLC ವಿದ್ಯಾರ್ಥಿ..!

    ಬಂಟ್ವಾಳ: ಕಲಿಕಾ ಹಿಂಜರಿಕೆಯಿಂದ  SSLC ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

    ಬಂಟ್ವಾಳ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.  ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಭವಿಷ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಡಕಬೈಲು ಸೈಂಟ್ ಡೊಮೊನಿಕ್ ಆಂಗ್ಲ ‌ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಭವಿಷ್ಯ ಕಲಿಯುತ್ತಿದ್ದ. ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂದು ಮನೆಯವರು ತಿಳಿಸಿದ್ದಾರೆ. ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಈತ 8 ಗಂಟೆಯಾದರೂ ವಾಪಸು ಬರದ್ದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಾಲಕನನ್ನು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂಡು ಬಂದು ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದರು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply