BELTHANGADI
100% ರಿಸಲ್ಟ್ ಗೆ ಎಸ್ಎಸ್ಎಲ್ ಸಿ ಪರೀಕ್ಷೆ ನಿರಾಕರಣೆ ಪ್ರಕರಣ ಸುಖಾಂತ್ಯ- ಪರೀಕ್ಷೆ ಬರೆದ ವಿಧ್ಯಾರ್ಥಿನಿಯರು

ಉಪ್ಪಿನಂಗಡಿ ಎಪ್ರಿಲ್ 03: ಶೇಕಡ 100 ರಷ್ಟು ಫಲಿತಾಂಶ ಬರಬೇಕು ಎಂದು ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಈ ಇಬ್ಬರೂ ವಿಧ್ಯಾರ್ಥಿನಿಯರು ಬುಧವಾರದಿಂದ ಪರೀಕ್ಷೆ ಬರೆದಿದ್ದಾರೆ.
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಶೇಕಡ ನೂರರಷ್ಟು ಫಲಿತಾಂಶ ಬರಬೇಕೆಂದು ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೆ ಪರೀಕ್ಶೆ ಬರೆಯಲು ನಿರಾಕರಿಸಲಾಗಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಇಬ್ಬರಿಗೂ ಪ್ರವೇಶ ಪತ್ರ ನೀಡಿದ್ದರು. ಆ ಬಳಿಕವೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಹಿಂದೇಟು ಹಾಕಿದ್ದರು. ಅವರ ಮನವೊಲಿಸಿದ ಪರಿಣಾಮ ಕರಾಯ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿಜ್ಞಾನ ಪರೀಕ್ಷೆಯನ್ನು ಬರೆದರು. ಉಳಿದ ಒಂದು ಪರೀಕ್ಷೆಯನ್ನು ಬರೆದರೆ, ಉಳಿದ ನಾಲ್ಕು ಪರೀಕ್ಷೆಗಳನ್ನು ಮುಂದಿನ 2 ಹಂತಗಳಲ್ಲಿ ಬರೆಯಬಹುದಾಗಿದೆ.

ಪ್ರಕರಣದ ಬಗ್ಗೆ ಬಂದ ದೂರನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನೆರಡು ಹಂತಗಳಲ್ಲೂ ತೃಪ್ತಿಕರ ಅಂಕ ಬಾರದಿದ್ದರೆ ಮೂರನೇ ಹಂತದ ಪರೀಕ್ಷೆಯನ್ನು ಬರೆಯಲು ಅವಕಾಶವಿದೆ ಎಂದು ತಾರಕೇಸರಿ ತಿಳಿಸಿದ್ದಾರೆ.