Connect with us

    LATEST NEWS

    ಡಯಟ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ನವೀನ್ ಪೊಲೀಸ್ ವಶಕ್ಕೆ

    ಮಂಗಳೂರು ಸೆಪ್ಟೆಂಬರ್ 20: ಮಂಗಳೂರಿನ ಜಿಲ್ಲಾ ಶಿಕ್ಷಕ ಮತ್ತು ತರಬೇತಿ ಸಂಸ್ಥೆ ಮೂವರು ಮಹಿಳಾ ಸಿಬ್ಬಂದಿ ಮೇಲೆ ತಲವಾರಿನಿಂದ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


    ಬಂಧಿತನನ್ನು ಕುಂದಾಪುರ ನಿವಾಸಿ ನವೀನ್ ಎಂದು ಗುರುತಿಸಲಾಗಿದ್ದು, ಈತ ಕುಂದಾಪುರ ನ್ಯಾಯಾಲಯದಲ್ಲಿ ಜವಾನನಾಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.  ಇಂದು ಡಯಟ್ ಸಂಸ್ಥೆಗೆ ಇಂದು ಮಧ್ಯಾಹ್ನ 12.45ರ ಸುಮಾರಿಗೆ ಟೀಚರ್ ಒಬ್ಬರಿಗೆ ಗಿಪ್ಟ್ ನೀಡಲು ಇದೆ ಎಂದು ಕೇಳಿಕೊಂಡ ಬಂದ ನವೀನ್ ಶಿಕ್ಷಕೇತರ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದ ಕೊಠಡಿಯೊಳಗೆ ನುಗ್ಗಿ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಆ ಸಂದರ್ಭ ಅಲ್ಲಿದ್ದ ಡಿ ದರ್ಜೆಯ ಮಹಿಳಾ ಸಿಬ್ಬಂದಿ ತಡೆಯಲು ಆಗಮಿಸಿದ್ದು, ಆಕೆಯ ಮೇಲೂ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಮೂವರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಯೋಗಕ್ಷೇಮ ವಿಚಾರಿಸಿದ್ದಾರೆ. ಬರ್ಕೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ಗಾಯಗೊಂಡವರನ್ನು ರೀನ, ಗುಣವತಿ ಹಾಗೂ ನಿರ್ಮಲ ಎಂದು ಗುರುತಿಸಲಾಗಿದೆ. ಸದ್ಯ ಅವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply