LATEST NEWS
ತೊಕ್ಕೊಟ್ಟು ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ

ತೊಕ್ಕೊಟ್ಟು ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ
ಮಂಗಳೂರು ಡಿಸೆಂಬರ್ 21: ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬನ ಮೇಲೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ನಿತಿನ್ ಎಂದು ಗುರುತಿಸಲಾಗಿದ್ದು, ನಿತಿನ್ ತೊಕ್ಕೊಟ್ಟುವಿನ ಅಂಬಿಕಾ ರೋಡ್ ಎಂಬಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಿತಿನ್ ಗೆ ಬೆನ್ನ ಹಿಂದಿನಿಂದ ಚೂರಿ ಇರಿದು ಪರಾರಿಯಾಗಿದ್ದಾರೆ. ಚೂರಿ ಇರಿತದಿಂದ ಗಾಯಗೊಂಡ ನಿತಿನ್ ನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗ ದಾಖಲಿಸಲಾಗಿದೆ.ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
