ವಿಟ್ಲ ಮೇ 07: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯೊಬ್ಬರ ಮೇಲೆ ಯದ್ವಾತದ್ವಾ ಮಾರಕಾಸ್ತ್ರದಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ.

ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆಯ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ವ್ಯಕ್ತಿಯನ್ನು ನಾಟೆಕಲ್ಲು ನವಗ್ರಾಮದ ನಿವಾಸಿ ಸೆಂಟ್ರಿಂಗ್ ಶೇಖರ ಯಾನೆ ಶೇಖರ ಪೂಜಾರಿ(50) ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.