Connect with us

    KARNATAKA

    ಕೆಲಸದ ಮೇಳೆ ಕುಸಿದು ಬಿದ್ದ ನರ್ಸ್…ಸಾವಿನಲ್ಲೂ ಸಾರ್ಥಕತೆ ಬರೆದ ಗಾನವಿ ಗೌಡ

    ಶಿವಮೊಗ್ಗ : ಕೆಲಸದ ವೇಳೆ ಕುಸಿದು ಬಿದ್ದು ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ನರ್ಸ್ ಅವರ ಅಂಗಾಂಗಳನ್ನು ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.


    ಎನ್.ಆರ್.ಪುರ ತಾಲೂಕು ಕಟ್ಟಿ ನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ ಪುತ್ರಿ ಗಾನವಿ ಗೌಡ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದರು . ಫೆ.8ರಂದು ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಸ್ಪತ್ರೆಯಲ್ಲೇ ಕುಸಿದು ಬಿದ್ದ ಗಾನವಿ ಮೇಲೆ ಏಳಲೇ ಇಲ್ಲ. ಪ್ರಾ ಥಮಿಕ ಚಿಕಿತ್ಸೆ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಪೆಟ್ಟಾಗಿತ್ತು, ಮಿದುಳಿನ ಶಸ್ತ್ರ ಚಿಕಿತ್ಸೆ ನಡೆಸಿದರೂ ಯಶಸ್ವಿಯಾಗಿರಲಿಲ್ಲ.

    ಈ ವೇಳೆ ವೈದ್ಯರು ಮಿದುಳು ನಿಷ್ಕ್ರಿಯವಾಗಿರುವುದಾಗಿ ತಿಳಿಸಿದರು. ಇದರಿಂದ ಪೋಷಕರು ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ತಾಯಿ ಮತ್ತು ಅಕ್ಕ ಅಂಗಾಂಗ ದಾನಕ್ಕೆ ಸಹಿ ಮಾಡುವ ಮೂಲಕ ಹಲವರಿಗೆ ಮಾದರಿಯಾದರು. ಗಾನವಿ ಅವರಿಂದ ‘ಲಿವರ್‌, ಕಿಡ್ನಿ, ಕಾರ್ನಿಯಾ ಮತ್ತು ಹಾರ್ಟ್‌ ವಾಲ್‌ ದಾನವಾಗಿ ಪಡೆಯಲಾಗಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ. ನಾಗೇಶ್‌ ತಿಳಿಸಿದ್ದಾರೆ. ಈಗಾಗಲೇ ‘ಸಕ್ರಾ ಆಸ್ಪತ್ರೆಯ 48 ವರ್ಷದ ವ್ಯಕ್ತಿಗೆ ಯಕೃತ್‌, ಮಣಿಪಾಲ್‌ ಆಸ್ಪತ್ರೆಯ 40 ವರ್ಷದ ಮಹಿಳೆಗೆ ಬಲಭಾಗದ ಮೂತ್ರಪಿಂಡ, ಐಎನ್‌ಯು ಆಸ್ಪತ್ರೆಯ 35 ವರ್ಷದ ಪುರುಷನಿಗೆ ಎಡಭಾಗದ ಮೂತ್ರಪಿಂಡ ಕಸಿ ಮಾಡಲಾಗಿದೆ. ಮಣಿಪಾಲ್‌ ಆಸ್ಪತ್ರೆಗೆ ಹೃದಯ ನಾಳಗಳನ್ನು ಮತ್ತು ಮಿಂಟೋ ಕಣ್ಣಿನ ಆಸ್ಪತ್ರೆಗೆ ಕಾರ್ನಿಯಾಗಳನ್ನು ಕಳಿಸಿದ್ದು, ಅರ್ಹ ಮೂರು ಮಂದಿಗೆ ಕಸಿ ಮಾಡಲಾಗುವುದು’ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

    ಘಟನೆ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ”ಗಾನವಿ ಅವರು ಜೀವಂತವಾಗಿದ್ದಾಗ ರೋಗಿಗಳ ಆರೈಕೆ ಮಾಡಿದರು, ಕಾಳಜಿ ವಹಿಸಿದರು. ಮರಣದ ನಂತರ ಅಂಗಾಂಗ ದಾನ ಮಾಡಿದರು. ದುರಂತ ಸಾವಿನ ನಂತರ ‘ಪರೋಪಕಾರಾರ್ಥಂ ಯೋ ಜೀವತಿ ಸ ಜೀವತಿ’- ‘ಬೇರೆಯವರಿಗೋಸ್ಕರ ಬದುಕುವವರು ಮಾತ್ರ ಯಾವಾಗಲೂ ಬದುಕಿರುತ್ತಾರೆ’ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ.

     

    ಹೃದಯ ವಿದ್ರಾವಕ ಘಟನೆಯ ನಡುವೆಯೂ ಗಾನವಿ ಕುಟುಂಬದವರು ತೆಗೆದುಕೊಂಡ ನಿರ್ಣಯಕ್ಕೆ ಹ್ಯಾಟ್ಸ್‌ ಆಫ್‌ ಹೇಳಲೇ ಬೇಕು. ಅಂಗಾಂಗ ದಾನ ಪ್ರತಿಜ್ಞೆ ತೆಗೆದುಕೊಳ್ಳುವುದಕ್ಕೆ ಗಾನವಿ ಸ್ಫೂರ್ತಿಯಾಗಿದ್ದಾರೆ. ಇನ್‌ಸ್ಟಿಟ್ಯೂಟ್‌ ಆಫ್‌ ಗ್ಯಾಸ್ಟೊ್ರೕ ಎಂಟರಾಲಜಿ ಮತ್ತು ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ನಲ್ಲಿಇದು ಮೊದಲ ಅಂಗ ಹಿಂಪಡೆಯುವಿಕೆಯಾಗಿದೆ’ ಎಂದು ಹೇಳಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply