Connect with us

    LATEST NEWS

    ಸುಪ್ರೀಂಕೋರ್ಟ್ ವಿರುದ್ಧ ಹಾಸ್ಯ ಕಲಾವಿದನ ಚೇಷ್ಟೆ, ಕುನಾಲ್ ಕಮ್ರ ವಿರುದ್ಧ ಕ್ರಮಕ್ಕೆ ಹೆಚ್ಚಿದ ಒತ್ತಡ…….

    ಮುಂಬೈ,ನವೆಂಬರ್ 11: ಸುಪ್ರೀಂಕೋರ್ಟ್ ಹಾಗೂ ಸುಪ್ರೀಕೋರ್ಟ್ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ಹಾಸ್ಯ ಕಲಾವಿದ ಕುನಾಲ್ ಕಮ್ರ ಭಾರೀ ವಿವಾದಕ್ಕೆ ಕಾರಣವಾಗಿದ್ದಾರೆ.

    ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ವೈಯುಕ್ತಿಕ ದ್ವೇಷ ಹೊಂದಿರುವ ಕುನಾಲ್ ಕಮ್ರ ಈ ದ್ವೇಷವನ್ನು ದೇಶದ ಸರ್ವೋಚ್ಛ ನ್ಯಾಯಾಲಯ ಹಾಗೂ ನ್ಯಾಯಾಧೀಶರ ಮೇಲೆ ತೀರಿಸಿಕೊಂಡಿದ್ದಾನೆ. ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದ ತಕ್ಷಣವೇ ತನ್ನ ಟ್ವೀಟರ್ ಖಾತೆಯಲ್ಲಿ ಸುಪ್ರೀಂಕೋರ್ಟ್ ಒಂದು ದೊಡ್ಡ ಜೋಕ್ , ನ್ಯಾಯಮೂರ್ತಿ ಚಂದ್ರಚೂಡ್ ಮದ್ಯದ ಹಿಂದೆ ಓಡುವ ಸೇವಕ ಎನ್ನುವ ರೀತಿಯಲ್ಲಿ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾನೆ.

    ಅಲ್ಲದೆ ಸುಪ್ರೀಂಕೋರ್ಟ್ ನ ಚಿತ್ರದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಚಿತ್ರಿಸುವ ಮೂಲಕ ಸುಪ್ರೀಂಕೋರ್ಟ್ ಬಿಜೆಪಿ ಪಕ್ಷದ ಪರವಾಗಿದೆ ಎನ್ನುವ ಅಧಾರವಿಲ್ಲದ ಪೋಸ್ಟ್ ಹಾಕುವ ಮೂಲಕ ವಿವಾದವನ್ನು ಮೈಗೆಳೆದುಕೊಂಡಿದ್ದಾನೆ. ಸುಪ್ರೀಂಕೋರ್ಟ್ ಹಾಗೂ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಈ ರೀತಿಯ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿ ಬರಲಾರಂಭಿಸಿದೆ.

    ಈ ಹಿಂದೆ ಸುಪ್ರೀಂಕೋರ್ಟ್ ನ್ಯಾಯವಾದಿಯಾಗಿದ್ದ ಪ್ರಶಾಂತ್ ಭೂಷಣ್ ಕೂಡಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಗೆ ಇದೇ ರೀತಿಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಬಳಿಕ ಪ್ರಶಾಂತ್ ಭೂಷಣ್ ಸುಪ್ರೀಂಕೋರ್ಟ್ ಕ್ಷಮೆ ಕೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು. ಇದೀಗ ಹಾಸ್ಯ ಕಲಾವಿದ ಕುನಾಲ್ ನ ಈ ಚೇಷ್ಟೆಗೆ ದೇಶದ ಸರ್ವೋಚ್ಛ ನ್ಯಾಯಾಲಯ ಸೂಕ್ತ ಶಿಕ್ಷೆ ವಿಧಿಸಬೇಕು ಎನ್ನುವ ಒತ್ತಾಯವೂ ಕೇಳಿ ಬರಲಾರಂಭಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply