Connect with us

BELTHANGADI

“ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮ ಪ್ರತಿನಿಧಿಗಳಿಗೆ ರಾಜ್ಯ ಸರ್ಕಾರ ಅಭಿನಂದನೆ

ಮಂಗಳೂರು : “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ದಕ್ಷಿಣ ಕನ್ನಡದ ಕುತ್ಲೂರು ಗ್ರಾಮದ ಪ್ರತಿನಿಧಿಗಳನ್ನು ರಾಜ್ಯ ಸರ್ಕಾರ ಅಭಿನಂದಿಸಿದೆ.
ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಸಪ್ಟೆಂಬರ್‌ 27 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ ಅಭಿನಂದಿಸಿದ್ದರು.
ಈ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳೂರಿನ “ದಿ ಓಶಿಯನ್ ಪರ್ಲ್” ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿನಿಧಿಗಳಾಗಿ ಭಾಗವಹಿಸಿದ್ದ ಸುಂದರ್ ಕೋಟ್ಯಾನ್, ಸಂತೋಷ್ ಮೆಲ್ವಿನ್ ಮತ್ತು ಶಿವರಾಜ್ ಅಂಚನ್ ಇವರನ್ನು ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ  ರಾಜೇಂದ್ರ ಕೆ ವಿ, ದ.ಕ. ಜಿಲ್ಲಾಧಿಕಾರಿ  ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಗೌರವಿಸಿ ಅಭಿನಂದಿಸಿದರು.
ಚುಣಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವ ಕಾರಣ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ಇರಲಿಲ್ಲ.
https://youtu.be/qTK7xOJzU_Y
Share Information
Continue Reading
Advertisement
Click to comment

Leave a Reply

Your email address will not be published. Required fields are marked *