ಮುಜರಾಯಿ ಇಲಾಖೆಯ ಮಹತ್ವದ ಕಾರ್ಯಕ್ರಮ ಉಚಿತ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು,ಜನವರಿ 10: ವಿಧಾನಸೌಧದಲ್ಲಿ ಸಪ್ತಪದಿ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಬಡ ಜನರಿಗೆ ನಡೆಯುವ ಉಚಿತ ವಿವಾಹದ ಯೋಜನೆ ಇದಾಗಿದೆ.

ಈ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದರು. ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಇದರ ಸಂಪೂರ್ಣ ಮುತುವರ್ಜಿಯನ್ನು ಸಚಿವರು ವಹಿಸಲಿದ್ದಾರೆ.

ಸಭೆಯಲ್ಲಿ ವಿವಿಧ ಶಾಸಕರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಏಪ್ರಿಲ್ 26 ರಂದು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ವಿವಿಧ ಎ ದರ್ಜೆಯ ದೇವಾಲಯಗಳಲ್ಲಿ ಉಚಿತ ಸಾಮೂಹಿಕ ಮದುವೆ ನಡೆಯಲಿದೆ.

ತಾಳಿ ಸಹಿತ ಚಿನ್ನಗಳು ಮತ್ತು ವಧುವಿಗೆ ಹತ್ತು ಸಾವಿರ ಹಾಗೂ ವರನಿಗೆ ಐದು ಸಾವಿರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರದ ವತಿಯಿಂದಲೇ ನೀಡಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments

comments