LATEST NEWS
ಗ್ಯಾರಂಟಿ ಗಾಗಿ ಆಸ್ತಿಗಳ ಮಾರ್ಗಸೂಚಿ ಮೌಲ್ಯ ಹೆಚ್ಚಿಸಿದ ರಾಜ್ಯ ಸರಕಾರ – ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಆರೋಪ
ಮಂಗಳೂರು ಮಾರ್ಚ್ 05: ರಾಜ್ಯ ಸರಕಾರ ಗ್ಯಾರಂಟಿಗಾಗಿ ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಅವೈಜ್ಞಾನಿಕವಾಗಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇದರಿಂದಾಗಿಯೇ ಪಾಲಿಕೆ ವ್ಯಾಪ್ತಿಯಲ್ಲಿ ಕೆಲವೆಡೆ ಆಸ್ತಿ ತೆರಿಗೆ ದುಪ್ಪಟ್ಟಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು,‘ಆಸ್ತಿಗಳ ಮಾರ್ಗಸೂಚಿ ಮೌಲ್ಯಕ್ಕನುಗುಣವಾಗಿಯೇ ಆಸ್ತಿ ತೆರಿಗೆ ಹೆಚ್ಚಳವಾಗುತ್ತದೆ. ಮಾರ್ಗಸೂಚಿ ಮೌಲ್ಯ ಭಾರಿ ಪ್ರಮಾಣಕ್ಕೆ ಹೆಚ್ಚಳವಾಗಿದ್ದರಿಂದ ನಗರದ ಆಸ್ತಿ ಮಾಲೀಕರ ಮೇಲೆ ಆರ್ಥಿಕ ಹೊರೆಯೂ ಹೆಚ್ಚಾಗಿದೆ. ಆಸ್ತಿಗಳ ಮಾರ್ಗಸೂಚಿ ಮೌಲ್ಯ ಕಡಿಮೆ ಮಾಡುವಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ನಮ್ಮ ಕೋರಿಕೆಗೆ ಸ್ಪಂದನೆ ಸಿಗದೇ ಹೋದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ. ಅನಿವಾರ್ಯವಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಎದುರೂ ಪ್ರತಿಭಟನೆ ನಡೆಸಲೂ ಹಿಂಜರಿಯಲ್ಲ’ ಎಂದು ಎಚ್ಚರಿಕೆ ನೀಡಿದರು.