ಬೆಳ್ತಂಗಡಿ, ಮಾರ್ಚ್ 23: ತಾಲೂಕಿನ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.), ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ವತಿಯಿಂದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗುವ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಕಾಶಿ ಶೆಟ್ಟಿ ನವಶಕ್ತಿ, ಗುರುವಾಯನಕೆರೆ ಅವರ ಸ್ಮರಣಾರ್ಥ ನಿರ್ಮಾಣಗೊಳ್ಳಲಿರುವ ಈ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ, ನವಶಕ್ತಿ, ಗುರುವಾಯನಕೆರೆ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ನ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಅಧ್ಯಕ್ಷ ಅಶೋಕ ಗೌಡ ಬರುಂಗುಡೇಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ ದಂಬೆತ್ತಿಮಾರು, ಮಾಜಿ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ ಸೇರಿದಂತೆ ಟ್ರಸ್ಟ್ನ ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.