LATEST NEWS
ಮಂಗಳೂರಿನ ಅಲ್ಪಸಂಖ್ಯಾತರ ಭವನಕ್ಕೆ ಕಲ್ಲು ತೂರಾಟ

ಮಂಗಳೂರು ಅಗಸ್ಟ್ 14: ಮಂಗಳೂರಿನ ಅಲ್ಪಸಂಖ್ಯಾತರ ಭವನಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಮಂಗಳೂರಿನ ಪಾಂಡೇಶ್ವರದಲ್ಲಿರುವ ರಾಜ್ಯ ಸರಕಾರದ ಸುಪರ್ದಿಯಲ್ಲಿರುವ ಮೌಲಾನ ಅಝಾದ್ ಅಲ್ಪಸಂಖ್ಯಾತರ ಭವನಕ್ಕೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಭವನದ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading