ಮೋದಿ ಪ್ರಚಾರ ಸಭೆ ಮುಗಿಸಿ ಹೋರಟ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ಕಲ್ಲು ತೂರಾಟ

ಮಂಗಳೂರು ಎಪ್ರಿಲ್ 13: ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಚುನಾವಣೆ ಪ್ರಚಾರ ಸಭೆ ಮುಗಿಸಿ ವಾಪಾಸ್ ತೆರಳುತ್ತಿದ್ದ ಕಾರ್ಯಕರ್ತರಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.

ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ವಾಪಸ್ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಉಳ್ಳಾಲದ ಮದನಿನಗರದಲ್ಲಿ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾಗಿದೆ. ಈ ಹಿನ್ನಲೆಯಲ್ಲಿ ಸ್ಥಳದಲ್ಲಿದ್ದ ಕೆಲವರು ಬಸ್ ಮೇಲೆ ಕಲ್ಲು ತೂರಿದ್ದಾರೆ. ಈ ಪರಿಣಾಮ ಬಸ್ಸಿನಲ್ಲಿದ್ದ ಬಿಜೆಪಿಯ ಕೆಲವು ಕಾರ್ಯಕರ್ತರಿಗೆ ಗಾಯಗಳಾಗಿವೆ.

ಬಳಿಕ ಸ್ಥಳದಲ್ಲಿ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು, ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು. ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ರವಾನಿಸಲಾಗಿದೆ.

8 Shares

Facebook Comments

comments