Connect with us

LATEST NEWS

ಅಟ್ಟಾಡಿಸಿಕೊಂಡು ಬಂದ ಬೀದಿ ನಾಯಿಗಳು- ಬಾಲಕರು ಗ್ರೇಟ್ ಎಸ್ಕೇಪ್

ತಿರುವನಂತಪುರಂ: ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಹಾವಳಿ ಬಗ್ಗೆ ಎಚ್ಚರಿಕೆ ನೀಡಿದೆ. ಈ ನಡುವೆ ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು. ಬೀದಿ ನಾಯಿಗಳ ಗುಂಪೊಂದು ಬಾಲಕರನ್ನು ಅಟ್ಟಿಸಿಕೊಂಡು ಬಂದ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ. 4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ ಬಾಲಕರು ಬಚಾವಾಗಿದ್ದನ್ನು ಗಮನಿಸಬಹುದಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *