LATEST NEWS
ಪೊಲೀಸರ ಮೇಲೆ ದಾಳಿ ನಡೆಸಿದರೆ ಕಠಿಣ ಕ್ರಮ – ಪೊಲೀಸ್ ಆಯುಕ್ತ ಶಶಿಕುಮಾರ್
ಮಂಗಳೂರು ಜನವರಿ 1: ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿರ್ಗಮನ ಕಮಿಷನರ್ ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ನಗರದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿದ ಘಟನೆ ಬಗ್ಗೆ ತಿಳಿದಿದೆ. ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸದೆ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವಾಗ ಯಾವುದೇ ರೀತಿಯ ಭಯ ಪಡುವ ಅಗತ್ಯವಿಲ್ಲ.
ಸರ ಅಪಹರಣ, ಕಳ್ಳತನ ಮೊದಲಾದ ಕೃತ್ಯಗಳನ್ನು ತಡೆಗಟ್ಟಲು ಈಗಾಗಲೇ ನಗರದ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲಾಗುವುದು. ಅಕ್ರಮ ಮರಳುಗಾರಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.