Connect with us

DAKSHINA KANNADA

ಪುತ್ತೂರು – ದ್ವಿಚಕ್ರ ವಾಹನ ಡಿಕ್ಕಿ ಹೊಡೆದನ್ನು ಪ್ರಶ್ನಿಸಿದ್ದಕ್ಕೆ ವಿಧ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಸವಾರರು – ದೂರು ದಾಖಲು

ಪುತ್ತೂರು ಅಕ್ಟೋಬರ್ 21: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿಧ್ಯಾರ್ಥಿಗಳ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ನಡೆಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿ ಮಹಮ್ಮದ್ ಝಿಯಾದ್(17) ಮತ್ತು ಜಿಡೆಕಲ್ಲು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮಹಮ್ಮದ್ ಇಜಾಝ್(20) ಹಲ್ಲೆಗೊಳಗಾದವರು.

ಝಿಯಾದ್ ಅವರು ಕಾಲೇಜು ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ಹಿಂಬಾಗದಿಂದ ಬಂದ ದ್ವಿಚಕ್ರ ವಾಹನ ಆತನಿಗೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಅವರು ರಸ್ತೆಗೆ ಬಿದ್ದಿದ್ದರು. ಈ ಬಗ್ಗೆ ಝಿಯಾದ್ ಬೈಕ್ ಸವಾರನಲ್ಲಿ ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಸವಾರ ಮತ್ತು ಸಹಸವಾರ ಝಿಯಾದ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಲ್ಲೆ ತಡೆಯಲು ಬಂದ ಇಜಾಝ್ ಅವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *