ಮಂಗಳೂರು  ಜುಲೈ 26 – ನ್ಯಾಶನಲ್ ಲೆವಲ್ ಬಾಲ್ ಬ್ಯಾಡ್ಮಿಂಟನ್ ಚಾಂಪಿನ್ ಆಗಿದ್ದ ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆ ಪ್ರಕರಣ ವಿವಾದಕ್ಕೆ ಕಾರಣವಾಗಿದೆ.. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯಾಗಿದ್ದ 15 ವರ್ಷದ ಕಾವ್ಯ ಜುಲೈ 20ರಂದು ಕಾಲೇಜಿನ ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಾಲೆಯಿಂದ ತಿಳಿಸಲಾಗಿತ್ತು. ಆದರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿತ್ತು. ಇದೀಗ ಹೆತ್ತವರು ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣವನ್ನು ಮುಚ್ಚಿ ಹಾಕಲು ಸಂಸ್ಥೆಯ ಆಡಳಿತ ಪ್ರಯತ್ನಿಸುತ್ತಿದೆ ಆರೋಪಿಸಿದ್ದಾರೆ. ತಮ್ಮ ಹುಡುಗಿ ಕ್ರೀಡಾಪಟುವಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವಂಥವಳಲ್ಲ. ಆಕೆಯನ್ನು ಶಾಲೆಯವರೇ ಕಿರುಕುಳ ಕೊಟ್ಟು ಕೊಲೆಗೈದಿರುವ ಸಂಶಯ ಇರುವುದಾಗಿ ವಿದ್ಯಾರ್ಥಿನಿಯ ತಾಯಿ ಬೇಬಿ ಆರೋಪಿಸಿದ್ದಾರೆ. ಘಟನೆ ನಡೆದ ರಾತ್ರಿ ಎಂಟು ಗಂಟೆಗೆ ಶಾಲೆಯ ದೈಹಿಕ ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿಸಿದ್ದಾರೆ. ಆದರೆ, ನಾವು ಅಲ್ಲಿಗೆ ತಲುಪುವ ಮುನ್ನವೇ ಶವವನ್ನು ಶವಾಗಾರದಲ್ಲಿರಿಸಿದ್ದಲ್ಲದೆ, ತಮಗೆ ಸರಿಯಾಗಿ ನೋಡುವುದಕ್ಕೂ ಅವಕಾಶ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಹೀಗಾಗಿ ನಮ್ಮ ಹುಡುಗಿ ಹೇಗೆ ಸಾವನ್ನಪ್ಪಿದ್ದಾಳೆ ಅನ್ನೋದು ಗೊತ್ತಾಗಬೇಕು. ಪೊಲೀಸರು ಸೂಕ್ತ ತನಿಖೆ ನಡೆಸಿ ನ್ಯಾಯ ದೊರಕಿಸಬೇಕಾಗಿ ಒತ್ತಾಯಿಸಿದ್ದಾರೆ. ಕಟೀಲು ಬಳಿಯ ದೇವರಗುಡ್ಡ ಎಂಬಲ್ಲಿನ ನಿವಾಸಿಗಳಾದ ಲೋಕೇಶ್ ಮತ್ತು ಬೇಬಿ ದಂಪತಿಯ ಏಕೈಕ ಪುತ್ರಿಯಾಗಿರುವ ಕಾವ್ಯ ಸಣ್ಣಂದಿನಿಂದಲೇ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದಳು. ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿಯೂ ಪಾಲ್ಗೊಂಡಿದ್ದು ಕಟೀಲು ಶಾಲೆಗೆ ಕೀರ್ತಿ ತಂದಿದ್ದಳು. ಅದರಂತೆ ಆಳ್ವಾಸ್ ಹೈಸ್ಕೂಲಿನ ದೈಹಿಕ ಶಿಕ್ಷಕರೇ ಕಾವ್ಯಾ ಹೆತ್ತವರನ್ನು ಸಂಪರ್ಕಿಸಿ, ತಮ್ಮ ಶಾಲೆಗೆ ಕಳಿಸಿಕೊಡಿ. ಕ್ರೀಡಾ ಕೋಟಾದಲ್ಲಿ ಉಚಿತವಾಗಿ ಶಿಕ್ಷಣ ಕೊಡಿಸುತ್ತೇವೆಂದು ಹೇಳಿ ಕರೆಸಿಕೊಂಡಿದ್ದರು. ಇದೇ ಜುಲೈ ಆರಂಭದಲ್ಲಿ ಕಟೀಲು ಶಾಲೆಯಿಂದ ಆಳ್ವಾಸ್ ಹೈಸ್ಕೂಲು ಸೇರಿದ್ದ ಕಾವ್ಯಾ ಇದೀಗ ನಿಗೂಢ ಸಾವು ಕಂಡಿದ್ದು ಹೆತ್ತವರನ್ನು ಆತಂಕಕ್ಕೀಡು ಮಾಡಿದೆ.

ಕಾವ್ಯ ನಿಗೂಡವಾಗಿ ಸಾವನ್ನಪ್ಪುವ ಹಿಂದಿನ ದಿನ ತನ್ನ ಹೆತ್ತವರೊಂದಿಗೆ ಮಾತನಾಡಿದ ಫೋನಿನ ಸಂಭಾಷಣೆಗಾಗಿ ಲಿಂಕನ್ನು ಒತ್ತಿರಿ..