LATEST NEWS
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ – ಆತ್ಮಹತ್ಯೆ ಮಾಡಿಕೊಂಡಿದ್ದ ವಿಧ್ಯಾರ್ಥಿ ಮೃತದೇಹ ಪತ್ತೆ

ಕುಂದಾಪುರ, ಸೆಪ್ಟೆಂಬರ್ 9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿಧ್ಯಾರ್ಥಿ ಮೃತದೇಹ ನಾವುದ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಎನ್ನುವವರ ಪುತ್ರ ಸಾಯೀಶ್ ಶೆಟ್ಟಿ (18) ಮೃತಪಟ್ಟ ವಿದ್ಯಾರ್ಥಿ.
ಕಲಿಕೆಯಲ್ಲಿ ಉತ್ತಮ ವಿಧ್ಯಾರ್ಥಿಯಾಗಿದ್ದ ಸಾಯೀಶ್ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕದ ನಿರೀಕ್ಷೆಯಲ್ಲಿದ್ದನು. ನೀಟ್ ಫಲಿತಾಂಶ ಪ್ರಕಟವಾದ ಹಿನ್ನಲೆ ಬೆಳಗ್ಗೆ ಸೈಬರ್ ಕೇಂದ್ರಕ್ಕೆ ತೆರಳಿ ಫಲಿತಾಂಶ ನೋಡಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷೆಯಲ್ಲಿ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂದು ಬೇಸರಗೊಂಡಿದ್ದ ಅವರು ಇದೇ ಕಾರಣಕ್ಕೆ ಗುರುವಾರ ಮಧ್ಯಾಹ್ನ 11.30ರ ವೇಳೆ ಸಂಗಮ್ ಸೇತುವೆಯ ಮೇಲಿನಿಂದ ಪಂಚಗಂಗಾವಳಿ ನದಿಗೆ ಹಾರಿದ್ದಾರೆನ್ನಲಾಗಿದೆ.

ನದಿಗೆ ಹಾರಿದ ವಿಷಯ ತಿಳಿಯುತ್ತಲೇ ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರು ಸಾಯೀಶ್ ರಿಗಾಗಿ ಶೋಧ ನಡೆಸಿದ್ದರೂ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ಪತ್ತೆ ಸಾಧ್ಯವಾಗಿರಲಿಲ್ಲ. ಇಂದು ಬೆಳಗ್ಗೆ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.