Connect with us

    BELTHANGADI

    ಬೆಳ್ತಂಗಡಿ – ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿಧ್ಯಾರ್ಥಿನಿ ಸಾವು..!!

    ಬೆಳ್ತಂಗಡಿ ಎಪ್ರಿಲ್ 29: ಗುರುವಾಯನಕೆರೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ನೀಟ್ ಕೋರ್ಸ್ ಕಲಿಯುತ್ತಿದ್ದ ವಿಧ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನಪ್ಪಿದ ಘಟನೆ ಏಪ್ರಿಲ್ 28 ರಂದು ಗುರುವಾಯನಕೆರೆಯಲ್ಲಿರುವ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ.


    ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿಯನ್ನು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಉಮೆ ಉಜ್ಮಾ ಎಸ್ (19 ವ.) ಎಂದು ಗುರುತಿಸಲಾಗಿದೆ. ಈಕೆ ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ವಿದ್ಯಾ ಸಂಸ್ಥೆಯಲ್ಲಿ ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ಲಾಂಗ್ ಟರ್ಮ್ ನೀಟ್ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಎಕ್ಸೆಲ್ ಕಾಲೇಜು ಹಾಸ್ಟೆಲಿನಲ್ಲಿ ಉಳಿದುಕೊಂಡಿದ್ದರು. ವಿದ್ಯಾರ್ಥಿನಿಯು ಏಪ್ರಿಲ್ 28 ರಂದು ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಆಕೆ ಉಳಿದುಕೊಂಡಿದ್ದ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

    ತಕ್ಷಣ ಅವರನ್ನು ಆಡಳಿತ ಮಂಡಳಿಯು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಿಸದೆ ಬೆಳಗ್ಗೆ 9 ಗಂಟೆಗೆ ವಿದ್ಯಾರ್ಥಿನಿ ಉಮೆ ಉಜ್ಮಾ ರವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯು ಪರೀಕ್ಷೆಯ ವಿಚಾರದಲ್ಲಿ ಭಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡರೋ ಅಥವಾ ಕಟ್ಟಡದಿಂದ ಜಾರಿ ಬಿದ್ದು ಸಾವನ್ನಪ್ಪಿದರೋ ಎಂಬ ಬಗ್ಗೆ ಸಂಶಯಗಳಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯ ತಂದೆ ಸನಾವುಲ್ಲರವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *