Connect with us

BANTWAL

ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲುಜಾರಿ ಬಿದ್ದು ವಿಧ್ಯಾರ್ಥಿ ಸಾವು

ಪುಂಜಾಲಕಟ್ಟೆ ಜೂನ್ 07: ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ.

ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ ಕಂಗಿತ್ತಿಲು ನಿವಾಸಿ ಶ್ರೀಧರ ಮೂಲ್ಯ ಅವರ ಪುತ್ರ, ಬಂಟ್ವಾಳ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಚೇತನ್ (19) ಎಂದು ಗುರುತಿಸಲಾಗಿದೆ.
ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ. ಅದೇ ರೀತಿ ಇಂದು ಸ್ನೇಹಿತರ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ಕಾರಿಂಜ ದೇವಸ್ಥಾನದ ಗದಾ ತೀರ್ಥ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಚೇತನ್ ಕಾಲು ಜಾರಿ ಕೆರೆಯೊಳಗೆ ಬಿದ್ದಿದ್ದಾನೆ.


ಜೊತೆಯಲ್ಲಿದ್ದ ಗೆಳೆಯರಿಗೆ ಈಜು ಬರದ ಕಾರಣ ಆತ ಬೊಬ್ಬೆ ಹೊಡೆದು ಸ್ಥಳೀಯರನ್ನು ಕರೆದಿದ್ದಾರೆ. ಕೂಡಲೇ ಸ್ಥಳೀಯರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆತ್ತಿ ಹಾಕಿದ್ದಾರೆ. ಆದರೆ ಅದಾಗಲೇ ಚೇತನ್ ಮೃತಪಟ್ಟಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

https://youtu.be/y78Xd97tcE0

Share Information
Continue Reading
Advertisement
2 Comments

2 Comments

    Leave a Reply

    Your email address will not be published. Required fields are marked *