BANTWAL
ಕೊನೆಗೂ ಉಡುಪಿಯಲ್ಲಿ ಪತ್ತೆಯಾದ ವಿಧ್ಯಾರ್ಥಿ ದಿಗಂತ್

ಪುತ್ತೂರು ಮಾರ್ಚ್ 08: ಇಡೀ ರಾಜ್ಯದಲ್ಲೇ ಸುದ್ದಿಯಾಗಿದ್ದ ಪಿಯು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆಯಾಗಿದ್ದ ವಿಧ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಉಡುಪಿಯ ಡಿ ಮಾರ್ಟ್ ನಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಡಿ ಮಾರ್ಟ್ ಒಳಗೆ ಬಟ್ಟೆಗಳನ್ನು ಬ್ಯಾಗ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್ ಸಿಕ್ಕಿಬಿದ್ದಿದ್ದು. ದಿಗಂತ ಚಲನವಲನ ಕಂಡು ಸಂಶಯಗೊಂಡ ಸಿಬ್ಬಂದಿ ವಿಚಾರಣೆ ನಡೆಸಿದ್ದಾನೆ. ಈ ವೇಳೆ ದಿಗಂತ್ ಎಂದು ಹೇಳಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಫೆ. 25ರ ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿತ್ತು. ಇದೀಗ ವಿಧ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಸತತ ಕಾರ್ಯಾಚರಣೆ ಬಳಿಕ ದಿಗಂತ್ ನನ್ನು ದಕ್ಷಿಣಕನ್ನಡ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಸದ್ಯ ಉಡುಪಿಯಿಂದ ಬಂಟ್ವಾಳದ ಮನೆಗೆ ದಿಗಂತ್ ನನ್ನು ಪೊಲೀಸರು ಕರೆತರುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.